HomeKarnatakaBREAKING: ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಕಿಚ್ಚ ಸುದೀಪ್

BREAKING: ಸುದ್ದಿಗೋಷ್ಠಿಯಲ್ಲೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಸುದ್ದಿಗೋಷ್ಠಿಯಲ್ಲಿ ಭಾಗವಹಿಸುತ್ತಿರುವುದು ಸತ್ಯ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಸುದೀಪ್, ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಯಾರ ಪರವೂ ಟಿಕೆಟ್ ಕೇಳುತ್ತಿಲ್ಲ. ಪಕ್ಷದಿಂದ ನಾನು ಟಿಕೆಟ್ ಕೊಡಿಸುವಷ್ಟು ದೊಡ್ಡವನಲ್ಲ ಎಂದು ಹೇಳಿದರು.

ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಡೆಸುತ್ತಿರುವ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸುದ್ದಿಗೋಷ್ಠಿಯಲ್ಲಿಯೇ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ವಿಚಾರವಾಗಿ ಮಾತನಾಡಿದ ಸುದೀಪ್, ಚಿತ್ರರಂಗದಲ್ಲಿ ಕೆಲವರು ನನ್ನ ಕಂಡರೆ ಆಗದವರು ಇದ್ದಾರೆ. ಇಂತಹ ಬೆದರಿಕೆಗಳಿಗೆಲ್ಲ ನಾನು ಹೆದರಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular