ಬೆಂಗಳೂರು : ಸೆ.22 ರಿಂದ ಅ.7 ರವರೆಗೆ ಹೊಸದಾಗಿ ಜಾತಿ ಗಣತಿ ನಡೆಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಮಾಡಿ ಸಿಎಂ ಸಿದ್ದರಾಮಯ್ಯ ಜಾತಿಗಣತಿಯ ಮರುಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ”ಸೆ.22 ರಿಂದ ಅ.7 ರವರೆಗೆ ಸಮೀಕ್ಷೆ ನಡೆಯಲಿದೆ. ಶಿಕ್ಷಕರನ್ನು ಬಳಸಿಕೊಂಡು ಸಮೀಕ್ಷೆ ನಡೆಸುತ್ತೇವೆ. ದಸರಾ ರಜೆ ವೇಳೆ ಸಮೀಕ್ಷೆ ನಡೆಸುತ್ತೇವೆ ಎಂದರು.
ಮಧುಸೂಧನ್ ನಾಯ್ಕ್ ಅಧ್ಯಕ್ಷತೆಯಲ್ಲಿ ಸಮೀಕ್ಚೆ ನಡೆಸುತ್ತೇವೆ. ಸಮೀಕ್ಷೆ ವೇಳೆ 60 ಪ್ರಶ್ನೆಗಳನ್ನು ಕೇಳುತ್ತೇವೆ, ಯಾರೂ ಕೂಡ ತಪ್ಪಿಸಿಕೊಳ್ಳಬಾರದು. ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಸಮೀಕ್ಷೆಯಲ್ಲಿ ಭಾಗಿ ಆಗಲು ಸಾಧ್ಯವಾಗದಿದ್ರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಕರನ್ನು ಸರ್ವೆಗೆ ಬಳಕೆ ಮಾಡಲಾಗುತ್ತದೆ 1,75,000 ಉಪಾಧ್ಯಾಯರನ್ನು ನೇಮಕ ಮಾಡುತ್ತಿದ್ದೇವೆ. ಸರ್ವೆ ಮಾಡುವವರಿಗೆ ವೇತನ ನೀಡಲು 325 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದರು.
ಈ ಹಿಂದೆ ಕಾಂತರಾಜ್ ವರದಿ ಸಮೀಕ್ಷೆಯ ವೇಳೆ 54 ಪ್ರಶ್ನೆಗಳನ್ನು ಕೇಳಿತ್ತು, ಈ ಸಮೀಕ್ಷೆ ವೇಳೆ 60 ಪ್ರಶ್ನೆಗಳನ್ನು ಕೇಳುತ್ತಾರೆ . ಆಧಾರ್ ಪಡಿತರ ಚೀಟಿ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡುತ್ತಾರೆ ಮೊಬೈಲ್ ಇಲ್ಲದಿದ್ದರೆ ಆ ಮನೆಗಳ ಸರ್ವೆ ಕೂಡ ಮಾಡುತ್ತಾರೆ. ಒಂದು ವೇಳೆ ಮನೆಯಲ್ಲಿ ಇಲ್ಲದಿದ್ದರೆ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು. 8050770004 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದರು.