HomeKarnatakaBREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ.

ಸ್ಯಾಮ್ಯುಯಲ್ ಜೇಸುದಾಸ್ (67) ಹಾಗೂ 30 ವರ್ಷದ ಮಗಳು ಮೃತರು. ಸಿಗ್ನಲ್ ಬಳಿ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಆಕ್ರೋಶಗೊಂಡ ಸಾರ್ವಜನಿಕರು ಲಾರಿ ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular