HomeKarnatakaBREAKING: ಸ್ಯಾಂಟ್ರೋ ರವಿ ಕೇಸ್; CIDಗೆ ವರ್ಗಾವಣೆ

BREAKING: ಸ್ಯಾಂಟ್ರೋ ರವಿ ಕೇಸ್; CIDಗೆ ವರ್ಗಾವಣೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸ್ಯಾಂಟ್ರೋ ರವಿ ಎರಡನೇ ಪತ್ನಿ ಮೈಸೂರಿನ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮೈಸೂರು ನಗರ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಸ್ಯಾಂಟ್ರೋ ರವಿ ಕೇಸ್ ನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸ್ಯಾಂಟ್ರೋ ರವಿ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular