BREAKING : ಹಿಂದೂ ಕಾರ್ಯಕರ್ತ ‘ಸುಹಾಸ್ ಶೆಟ್ಟಿ’ ಕೊಲೆ ಕೇಸ್ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಬಂದ್ ಮಾಡಿ ಆದೇಶ.!

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ಕೆರಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಬಂದ್ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. ನಾಳೆ ಬೆಳಗ್ಗೆ 6 ಗಂಟೆವರೆಗೆ ಮದ್ಯದಂಗಡಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿನ್ನೆಲೆಯಲ್ಲಿ ಮೇ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮೇ 2 ರಿಂದ ಮೇ 6 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ವಿಧಿಸಲಾಗಿದೆ.
ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (ಬಿಎನ್ಎಸ್ಎಸ್) ಸೆಕ್ಷನ್ 163 ರ ಅಡಿಯಲ್ಲಿ ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಪಮ್ ಅಗರ್ವಾಲ್ ಈ ನಿರ್ದೇಶನ ನೀಡಿದ್ದಾರೆ.

ಬಜರಂಗದಳಕ್ಕೆ ಕಾರ್ಯಕರ್ತ ಶೆಟ್ಟಿ ಅವರ ಮೇಲೆ ಬಜ್ಪೆಯಲ್ಲಿ ಗುರುವಾರ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಹತ್ಯೆಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಈ ಪ್ರದೇಶದಲ್ಲಿ ಕೋಮು ಸೌಹಾರ್ದತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read