HomeKarnatakaBREAKING: ಹಿಂಸಾಚಾರಕ್ಕೆ ತಿರುಗಿದ ಬಂಜಾರಾ ಸಮುದಾಯದ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

BREAKING: ಹಿಂಸಾಚಾರಕ್ಕೆ ತಿರುಗಿದ ಬಂಜಾರಾ ಸಮುದಾಯದ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗದ ಶಿಕಾರಿಪುರದಲ್ಲಿ ಬಂಜಾರಾ ಸಮುದಾಯದ ಕಿಚ್ಚು ಹೆಚ್ಚಿದ್ದು, ತಾಲೂಕಿನಾದ್ಯಂತ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ.

ಒಳಮೀಸಲಾತಿ ವಿಂಗಡಣೆ ವಿರೋಧಿಸಿ ಶಿಕಾರಿಪುರ ತಾಲೂಕಿನಲ್ಲಿ ಬಂಜಾರಾ ಸಮುದಾಯದವರು ಕರೆಕೊಟ್ಟಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲುತೂರಾಟ ನಡೆದಿದೆ.

ಉದ್ರಿಕ್ತರ ಗುಂಪಿನ ಕಲ್ಲು ತೂರಾಟದಿಂದ ಯಡಿಯೂರಪ್ಪ ನಿವಾಸದ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದೆ. ಅಲ್ಲದೇ ಬಿಜೆಪಿ ಬ್ಯಾನರ್ ಗಳನ್ನು ಹರಿದು, ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಶಿಕಾರಿಪುರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ತಾಲೂಕಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕು ತಹಶೀಲ್ದಾರ್ ವಿಶ್ವನಾಥ್ ಶಿಕಾರಿಪುರದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular