ಹುಬ್ಬಳ್ಳಿ : ಕಸ ಸಂಗ್ರಹಿಸುವ ವಾಹನ ಹರಿದು 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಹಮೀದಾಬಾನು ಕಬಾಡೆ (6 ) ಎಂದು ಗುರುತಿಸಲಾಗಿದೆ.
ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಹಿನ್ನೆಲೆ ಪಾಲಿಕೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕಿಯ ಶವವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸೇರಿದ ಕಸ ಸಂಗ್ರಹಿಸುವ ವಾಹನ ಇದಾಗಿದೆ. ಘಟನೆ ಹಿನ್ನೆಲೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
You Might Also Like
TAGGED:6 ವರ್ಷದ ಬಾಲಕಿ ಸಾವು.!