ಬೆಂಗಳೂರು : ಹೃದಯಾಘಾತಕ್ಕೆ ಕೋವಿಡ್ ಕಾರಣ, ಲಸಿಕೆ ಅಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.
ವರದಿಯಲ್ಲಿ ಕೊರೊನಾ ಸೋಂಕು ಬಂದವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು , ಲಸಿಕೆ ಎಫೆಕ್ಟ್ ನಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ ಎಂದರು. ಹೃದಯಾಘಾತಕ್ಕೆ ಲಸಿಕೆ ಕಾರಣವಲ್ಲ. ಲಸಿಕೆಯಿಂದ ಜನರಿಗೆ ಅನುಕೂಲ ಆಗಿದೆ. ಆದರೆ, ಎಂಆರ್ಎನ್ಎ ವ್ಯಾಕ್ಸಿನ್ ಬಗ್ಗೆ ಸ್ವಲ್ಪ ಅನುಮಾನ ಇದೆ ಎಂದರು.
You Might Also Like
TAGGED:ಹೃದಯಾಘಾತ