ಜೈಪುರ : ಬೆಳ್ಳಂಬೆಳಗ್ಗೆ ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಿಂತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಗುಜರಾತ್ನಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ಹೆದ್ದಾರಿಯಲ್ಲಿ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಗುಜರಾತ್ನಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ ಹೆದ್ದಾರಿಯಲ್ಲಿ ನಿಂತಿದ್ದಾಗ ಅದು ಕೆಟ್ಟುಹೋಗಿದೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಾವುನೋವುಗಳು ಸಂಭವಿಸಿವೆ. ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ.
https://twitter.com/ANI_MP_CG_RJ/status/1701783751259517394?ref_src=twsrc%5Etfw%7Ctwcamp%5Etweetembed%7Ctwterm%5E1701783751259517394%7Ctwgr%5Ebf3571c303c33561c269641cddc8902cb028d2d6%7Ctwcon%5Es1_c10&ref_url=https%3A%2F%2Fwww.outlookindia.com%2Fnational%2Frajasthan-11-dead-12-injured-as-truck-rams-into-stationary-bus-on-jaipur-agra-national-highway-news-317548