HomeLatest NewsBREAKING: RCB ವಿಜಯೋತ್ಸವ ಸಂಭ್ರಮದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿ: HDK ದಿಗ್ಭ್ರಮೆ: ಕೂಡಲೇ ನೆರವಿಗೆ...

BREAKING: RCB ವಿಜಯೋತ್ಸವ ಸಂಭ್ರಮದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿ: HDK ದಿಗ್ಭ್ರಮೆ: ಕೂಡಲೇ ನೆರವಿಗೆ ಧಾವಿಸಲು ಆಗ್ರಹ | Bengaluru stampede

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular