ಕಲ್ಕತ್ತಾ : ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಸಾಧುಗಳನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 12 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಿಜೆಪಿ ನಾಯಕ ಅಮಿತ್ ಮಾಳವೀಯ ಅವರು, ಸಾಧುಗಳ ಮೇಲೆ ನಡೆದ ಹಲ್ಲೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಂಡಿದ್ದು, ಪಾಲ್ಘರ್ನಂತಹ ಘಟನೆ ಈಗ ಬಂಗಾಳದಲ್ಲಿ ಬೆಳಕಿಗೆ ಬಂದಿದೆ ಎಂದು ಬರೆದಿದ್ದಾರೆ.
ಮಕರ ಸಂಕ್ರಾಂತಿಗಾಗಿ ಗಂಗಾಸಾಗರಕ್ಕೆ ತೆರಳುತ್ತಿದ್ದ ಸಾಧುಗಳನ್ನು ಟಿಎಂಸಿ ಕಾರ್ಯಕರ್ತರು ವಿವಸ್ತ್ರಗೊಳಿಸಿ ಥಳಿಸಿದ್ದಾರೆ. ಬಂಗಾಳದಲ್ಲಿ ಸಾಧುಗಳನ್ನು ಬಹಿರಂಗವಾಗಿ ಕೊಲ್ಲುವ ಪ್ರಯತ್ನಗಳು ನಡೆಯುತ್ತಿವೆ. ಪಶ್ಚಿಮ ಬಂಗಾಳದಲ್ಲಿ ಹಿಂದೂ ಆಗಿರುವುದು ಅಪರಾಧ ಎಂದು ಕಿಡಿಕಾರಿದ್ದಾರೆ.
https://twitter.com/i/status/1745838999611359310
ಸಾಧುಗಳ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರು ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿದ್ದಾರೆ. ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ. ಆದರೆ, ಸಾಧು ಕಡೆಯಿಂದ ಯಾವುದೇ ಎಫ್ಐಆರ್ ದಾಖಲಾಗಿಲ್ಲ.