ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಚಮನ್ ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಮುಜಾಮಿಲ್ ಶಾಲೆಗೆ ರಜೆ ಹಿನ್ನೆಲೆ ಮನೆಗೆ ಬಂದಿದ್ದ. ಇಂದು ಮುಂಜಾನೆ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತ ಸಂಭವಿಸಿದೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದ್ದಾನೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

