HomeLatest NewsBREAKING: ಚಿತ್ರದುರ್ಗದಲ್ಲಿ ಬಸ್ ಗೆ ಬೆಂಕಿ ತಗುಲಿ 17 ಜನ ಸಾವು: ರಾಷ್ಟ್ರೀಯ ಹೆದ್ದಾರಿಯಲ್ಲಿ 30...

BREAKING: ಚಿತ್ರದುರ್ಗದಲ್ಲಿ ಬಸ್ ಗೆ ಬೆಂಕಿ ತಗುಲಿ 17 ಜನ ಸಾವು: ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

ಲಾರಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕ್ ಸಿಡಿದು ಬಸ್ ಗೆ ಬೆಂಕಿ ತಗುಲಿ 17 ಪ್ರಯಾಣಿಕರು ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. 32 ಆಸನಗಳ ಬಸ್ ನಲ್ಲಿ 29 ಪ್ರಯಾಣಿಕರು ಇದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು.

ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿದ್ದ 9 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಶಿರಾ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಡಿವೈಡರ್ ಹಾರಿ ಬಂದು ಬಸ್ ಗೆ ಲಾರಿ ಗುದ್ದಿದೆ. ಬಸ್ ನಲ್ಲಿದ್ದ ಡೀಸೆಲ್ ಟ್ಯಾಂಕರ್ ಸ್ಪೋಟಗೊಂಡು ಬೆಂಕಿ ತಗುಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ಸುಮಾರು ಮೂವತ್ತು ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಂದಗತಿಯಲ್ಲಿ ವಾಹನಗಳು ಸಾಗುತ್ತಿವೆ.

ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಭೀಕರ ದುರಂತ ಸಂಭವಿಸಿದೆ. ಶಿರಾ ಬಳಿಯಿಂದಲೂ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಬಸ್ ಚಾಲಕ ಮತ್ತು ನಿರ್ವಾಹಕ ಪಾರಾಗಿದ್ದಾರೆ. ಅಪಘಾತ ಎಸಗಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಕುಲದೀಪ್ ಮೃತಪಟ್ಟಿದ್ದಾರೆ. ಆಜಾಗರೂಕತೆಯಿಂದ ಲಾರಿ ಚಲಾಯಿಸಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಬಹುತೇಕರು ಕುಮುಟಾ ಮತ್ತು ಗೋಕರ್ಣ ಮೂಲದವರಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular