ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ.
ಬೈಕ್ ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
