HomeLatest NewsBREAKING: ದೆಹಲಿ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಬಳಿ ಕಾರ್ ನಲ್ಲಿ ಭಾರೀ ಸ್ಪೋಟ, 4 ವಾಹನಗಳಿಗೆ...

BREAKING: ದೆಹಲಿ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಬಳಿ ಕಾರ್ ನಲ್ಲಿ ಭಾರೀ ಸ್ಪೋಟ, 4 ವಾಹನಗಳಿಗೆ ಬೆಂಕಿ

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಎರಡು ಕಾರ್ ಗಳು ಸ್ಪೋಟಗೊಂಡಿವೆ. ದೆಹಲಿಯ ಕೆಂಪು ಕೋಟೆ ಸಮೀಪದ ಮೆಟ್ರೋ ನಿಲ್ದಾಣ ಗೇಟ್ ನಂಬರ್ 1ರ ಬಳಿ ಒಂದು ಕಾರ್ ಸ್ಫೋಟಗೊಂಡಿದ್ದು, ಸಮೀಪದಲ್ಲೇ ಇದ್ದ ಮತ್ತೊಂದು ಕಾರ್ ಕೂಡ ಧಗಧಗನೆ ಹೊತ್ತಿ ಉರಿದಿದ್ದು, ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದ ಬಗ್ಗೆ ಕರೆ ಬಂದಿದ್ದು, ನಂತರ ಮೂರರಿಂದ ನಾಲ್ಕು ವಾಹನಗಳು ಬೆಂಕಿಗೆ ಆಹುತಿಯಾಗಿ ಹಾನಿಯಾಗಿವೆ ದೆಹಲಿ ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಮೊದಲು ಕಾರ್ ನಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ನಂತರ ಸಮೀಪದಲ್ಲೇ ಇದ್ದ ಮತ್ತೊಂದು ಕಾರ್ ಸೇರಿ ನಾಲ್ಕು ವಾಹನಗಳು ಹೊತ್ತಿ ಉರಿದಿವೆ. ಇದು ವಿಧ್ವಂಸಕ ಕೃತ್ಯವೇ ಅಥವಾ ತಾಂತ್ರಿಕ ದೋಷದಿಂದ ಕಾರ್ ನಲ್ಲಿ ಸ್ಪೋಟ ಸಂಭವಿಸಿದೆಯೇ ಎಂದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular