ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ.
ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಗ್ನಿ ಅವಘಡ ತೀವ್ರ ದುಃಖಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಜಿ ಅವರೊಂದಿಗೆ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇನೆ. ರಾಜ್ಯ ಸರ್ಕಾರವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.
ಗೋವಾದ ಅರ್ಪೋರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಮೋದಿ ತಿಳಿಸಿದ್ದಾರೆ.
An ex-gratia of Rs. 2 lakh from PMNRF will be given to the next of kin of each deceased in the mishap in Arpora, Goa. The injured would be given Rs. 50,000: PM @narendramodi https://t.co/BcS0jYnvVx
— PMO India (@PMOIndia) December 7, 2025
