HomeInternationalBREAKING : ಘೋರ ದುರಂತ : ಬಸ್ ಕಂದಕಕ್ಕೆ ಉರುಳಿ ಬಿದ್ದು 24 ಪ್ರಯಾಣಿಕರು ಸ್ಥಳದಲ್ಲೇ...

BREAKING : ಘೋರ ದುರಂತ : ಬಸ್ ಕಂದಕಕ್ಕೆ ಉರುಳಿ ಬಿದ್ದು 24 ಪ್ರಯಾಣಿಕರು ಸ್ಥಳದಲ್ಲೇ ಸಾವು

ವಾಷಿಂಗ್ಟನ್ : ದಕ್ಷಿಣ ಅಮೆರಿಕದ ಪೆರುವಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪ್ರಯಾಣಿಕರ ಬಸ್ ವೊಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ. ಇದನ್ನು ಅಲ್ಲಿನ ಅಧಿಕೃತ ಮೂಲಗಳು ಬಹಿರಂಗಪಡಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಂಡಿಸ್ ಪರ್ವತಗಳ ಮೂಲಕ ಹುವಾನ್ಯೊದಿಂದ ಹುವಾಂಟಾಗೆ ತೆರಳುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು 200 ಮೀಟರ್ ಆಳದ ಕಮರಿಗೆ ಬಿದ್ದಿದೆ. ಇದು ದೊಡ್ಡ ಅಪಘಾತಕ್ಕೆ ಕಾರಣವಾಯಿತು. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular