ಕಲಬುರಗಿ: ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಜೇವರ್ಗಿ ತಾಲೂಕಿನ ಮಾರಡಗಿ ಎ.ಸಿ. ಗ್ರಾಮದಲ್ಲಿ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವನೆಯ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 25 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿದೆ. ಗಂವ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಕೆಲವರನ್ನು ಜೇವರ್ಗಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಫುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.