HomeLatest NewsBREAKING: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥ

BREAKING: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥ

ಕಲಬುರಗಿ: ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದ 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಜೇವರ್ಗಿ ತಾಲೂಕಿನ ಮಾರಡಗಿ ಎ.ಸಿ. ಗ್ರಾಮದಲ್ಲಿ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಮಾರಡಗಿ ಎಸ್.ಎ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವನೆಯ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 25 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿದೆ. ಗಂವ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಕೆಲವರನ್ನು ಜೇವರ್ಗಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಫುಡ್ ಪಾಯಿಸನ್ ನಿಂದಾಗಿ ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular