BREAKING : ಪೋಕ್ಸೋ ಕೇಸ್ : ಡಿ.2 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : 2 ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮತ್ತೆ ಮುರುಘಾ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಡಿ.2 ರವರೆಗೆ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಡಿ. 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಬಂಧನದ ವಾರೆಂಟ್ ಜಾರಿ ಮಾಡಿತ್ತು. ಕೋರ್ಟ್ ಆದೇಶದಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಇನ್ ಸ್ಪೆಕ್ಟರ್ ಮುದ್ದುರಾಜ್ ನೇತೃತ್ವದ ತಂಡ ದಾವಣಗೆರೆ ವಿರಕ್ತ ಮಠಕ್ಕೆ ತೆರಳಿ ಮುರುಘಾ ಶ್ರೀಗಳನ್ನು ಬಂಧಿಸಿದೆ.
ಮೊದಲನೇ ಪೋಕ್ಸೋ ಕೇಸ್ ನಲ್ಲಿ ಹೈಕೋರ್ಟ್ ಡಾ.ಶಿವಮೂರ್ತಿ ಶರಣರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಮತ್ತೆ ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read