ಹಾಸನ: ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿ ಹುಟ್ಟುಹಬ್ಬ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಜುಲೈ 11 ರಂದು ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್. ಆಶಾ, ಎಸ್.ಎನ್. ಮಧುರ, ಎಂ.ಕೆ. ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಸಾರಿಗೆ ಇಲಾಖೆಯ ಶಿಸ್ತು ಪ್ರಾಧಿಕಾರದ ಆಯುಕ್ತ ಯೋಗೇಶ್ ಅಮಾನತು ಮಾಡಿದ್ದಾರೆ.