ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಾಳೆಹೊನ್ನೂರು ಠಾಣೆ ಪೊಲೀಸರು ಅಕ್ರಮವಾಗಿ ದಾಸ್ತಾನು ಮಾಡಿದ 300 ಚೀಲ ಯೂರಿಯಾ ರಸಗೊಬ್ಬರ ಜಪ್ತಿ ಮಾಡಿದ್ದಾರೆ.
ಬಾಳೆಹೊನ್ನೂರು ರಾಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಲಾರಿ ಸಮೇತ ಯೂರಿಯಾ ರಸಗೊಬ್ಬರವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ತಾಲೂಕು ಸುಭಾಷ್ ನಗರ ನಿವಾಸಿ ವಿಲ್ಪ್ರೆಡ್ ನನ್ನು ಬಂಧಿಸಲಾಗಿದೆ.
ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 300 ಮೂಟೆ ಯೂರಿಯಾ ಜಪ್ತಿ ಮಾಡಲಾಗಿದ್ದು, ಹಾಸನ ಜಿಲ್ಲೆಯಿಂದ ತಂದಿರುವುದಾಗಿ ವಿಲ್ಫ್ರೆಡ್ ಮಾಹಿತಿ ನೀಡಿದ್ದಾನೆ. ಅಧಿಕ ಬೆಲೆಗೆ ಯೂರಿಯಾ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಲಾಗಿತ್ತು. ಅಕ್ರಮ ದಾಸ್ತಾನು ಸಂಬಂಧ ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.