HomeLatest NewsBREAKING: ತಮಿಳುನಾಡಿನಲ್ಲಿ ಭೀಕರ ಕಾಲ್ತುಳಿತದಲ್ಲಿ 33 ಜನ ಸಾವು: ಪ್ರಧಾನಿ ಮೋದಿ ತೀವ್ರ ದುಃಖ

BREAKING: ತಮಿಳುನಾಡಿನಲ್ಲಿ ಭೀಕರ ಕಾಲ್ತುಳಿತದಲ್ಲಿ 33 ಜನ ಸಾವು: ಪ್ರಧಾನಿ ಮೋದಿ ತೀವ್ರ ದುಃಖ

ನವದೆಹಲಿ: ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ಅವರು ತಮಿಳುನಾಡಿನ ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಭಾರೀ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ 33ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮಹಿಳೆಯರು, ಮಕ್ಕಳು ಸೇರಿ 33 ಜನ ಸಾವನ್ನಪ್ಪಿದ್ದಾರೆ. 50ಕ್ಕೂ ಅಧಿಕ ಮಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಪ್ರಧಾನಿ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. “ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜಕೀಯ ರ್ಯಾಲಿಯ ಸಂದರ್ಭದಲ್ಲಿ ನಡೆದ ದುರದೃಷ್ಟಕರ ಘಟನೆ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಬೇಕೆಂದು ಹಾರೈಸುತ್ತೇನೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular