BREAKING: ಮೈಸೂರು ಜಿಲ್ಲೆಯಲ್ಲಿ ಸೆರೆಸಿಕ್ಕಿದ್ದ 4 ಹುಲಿ ಮರಿಗಳು ಸಾವು

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವು ಕಂಡಿವೆ. ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದ ಸಮೀಪ 4 ಹುಲಿ ಮರಿಗಳನ್ನು ಸೆರೆಹಿಡಿಯಲಾಗಿತ್ತು.

ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ. ನಾಲ್ಕು ದಿನಗಳ ಅಂತರದಲ್ಲಿ ನಾಲ್ಕು ಹುಲಿ ಮರಿಗಳು ಸಾವು ಕಂಡಿವೆ. ಹುಲಿಮರಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗೌಡನಕಟ್ಟೆ ಗ್ರಾಮದ ಬಳಿ ನ. 28ರಂದು 4 ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ತಾಯಿ ಹುಲಿ ಸೆರೆಹಿಡಿದ ಬಳಿಕ ಗೌಡನಕಟ್ಟೆಯ ಪ್ರಕಾಶ್ ಅವರ ಜೋಳದ ಹೊಲದಲ್ಲಿ ಅಡಗಿದ್ದ ಅದರ ನಾಲ್ಕು ಮರಿಗಳನ್ನು ಸುರಕ್ಷಿತವಾಗಿ ಸೆರೆಹಿಡಿಯಲಾಗಿತ್ತು. ಹುಲಿ ಮರಿಗಳಿಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆ ನೀಡಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು. ಈ ನಡುವೆ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ. ತಾಯಿ ಹುಲಿ ಆರೋಗ್ಯವಾಗಿದೆ. ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read