ಬೆಂಗಳೂರು: ರಾಜ್ಯದಲ್ಲಿ ಇಂದು 40 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 211 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 126 ಸಕ್ರಿಯ ಪ್ರಕರಣಗಳು ಇವೆ.
ಇಂದು 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಪಾಸಿಟಿವಿಟಿ ದರ ಶೇಕಡ 10.12ರಷ್ಟು ಇದೆ.
ಇಬ್ಬರು ಆಸ್ಪತ್ರೆಯಲ್ಲಿದ್ದು, 38 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
