ಬೆಂಗಳೂರು : ಕಳೆದ ಗುರುವಾರ ನಡೆದ 402 ಪಿಎಸ್ ಐ ಪರೀಕ್ಷೆಯ Paper-2ರ ಕೀ ಉತ್ತರಗಳನ್ನು ಕೆಇಎ ಪ್ರಕಟಿಸಿದೆ.
ಪೋಲಿಸ್ ಇಲಾಖೆಯಲ್ಲಿನ ಪಿ.ಎಸ್.ಐ (402) ಹುದ್ದೆಗಳಿಗೆ ದಿನಾಂಕ 03.10.2024 ರಂದು ಪರೀಕ್ಷೆಯನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಪತ್ರಿಕೆ-2 ರ ಕೀ ಉತ್ತರಗಳನ್ನು ಕೆಇಎ ವೆಬ್ಸೈಟ್ನಲ್ಲಿ http://kea.kar.nic.in ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಕೀ ಉತ್ತರಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಆನ್ ಲೈನ್ ಮೂಲಕವೇ ಅ.6ರ ಸಂಜೆ 5 ಗಂಟೆ ಒಳಗೆ ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆಗಳ ವಿವರಗಳನ್ನು ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಸಲ್ಲಿಸಲಾಗುವ ಪ್ರತಿ ಆಕ್ಷೇಪಣೆಗೆ ರೂ. 100 ನ್ನು ಪಾವತಿಸತಕ್ಕದ್ದು ಹಾಗೂ ಆಕ್ಷೇಪಣೆ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಮೇಲ್ಕಂಡ ನಿಗದಿತ ಮಾಹಿತಿಗಳನ್ನು ಸಲ್ಲಿಸದ ಅಥವಾ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.ವಿಷಯ ತಜ್ಞರ ಸಮಿತಿಯು ನಿರ್ಧರಿಸಿ, ತೀರ್ಮಾನಿಸುವ ಕೀ-ಉತ್ತರಗಳು ಅಂತಿಮವಾಗಿರುತ್ತವೆ ಎಂದು ಪ್ರಕಟಣೆ ಹೊರಡಿಸಿದೆ.
ಗುರುವಾರ ನಡೆದ #PSI ಪರೀಕ್ಷೆಯ Paper-2ರ ಕೀ ಉತ್ತರಗಳನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಆನ್ ಲೈನ್ ಮೂಲಕವೇ ಅ.6ರ ಸಂಜೆ 5 ಗಂಟೆ ಒಳಗೆ ಸಲ್ಲಿಸಬಹುದು.@CMofKarnataka @drmcsudhakar pic.twitter.com/ik006G8PWQ
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 4, 2024
ا


