HomeLatest NewsBREAKING: ಚಿತ್ರದುರ್ಗ ಬಳಿ ಅಪಘಾತದಲ್ಲಿ ಸಾವಿನ ದವಡೆಯಿಂದ ಪಾರಾದ 42 ಮಕ್ಕಳು

BREAKING: ಚಿತ್ರದುರ್ಗ ಬಳಿ ಅಪಘಾತದಲ್ಲಿ ಸಾವಿನ ದವಡೆಯಿಂದ ಪಾರಾದ 42 ಮಕ್ಕಳು

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಕಂಟೇನರ್ ಲಾರಿ ಎದುರಿನಿಂದ ಬರುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಗೆ ಬೆಂಕಿ ತಗುಲಿ 11 ಮಂದಿ ಮೃತಪಟ್ಟಿದ್ದಾರೆ.

ಇದೇ ವೇಳೆ ಸಾವಿನ ದವಡೆಯಿಂದ 42 ಮಕ್ಕಳು ಪಾರಾಗಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ನಲ್ಲಿದ್ದ ಮಕ್ಕಳು ಅದೃಷ್ಟವಶಾತ್ ಪಾರಾಗಿದ್ದಾರೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸುಟ್ಟು ಭಸ್ಮವಾದ ಬಸ್ ಪಕ್ಕದಲ್ಲೇ ಸಮನಾಂತರವಾಗಿ ಶಾಲಾ ಮಕ್ಕಳಿದ್ದ ಬಸ್ ತೆರಳುತ್ತಿತ್ತು. ಬೆಂಕಿ ತಗುಲಿದ ಬಸ್ ಶಾಲಾ ಮಕ್ಕಳ ಬಸ್ ಗೆ ಡಿಕ್ಕಿ ಹೊಡೆದಿದೆ. ಆದರೆ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ದಾಂಡೇಲಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳು ಇದ್ದ ಬಸ್ ಹೆದ್ದಾರಿಯ ತಡೆ ಬೇಲಿ, ಚರಂಡಿ ದಾಟಿ ಪಕ್ಕಕ್ಕೆ ಹೋಗಿ ನಿಂತಿದೆ. ಅದೃಷ್ಟವಶಾತ್ ಮಕ್ಕಳು ಸುರಕ್ಷಿತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ನಂತರ ಎಲ್ಲಾ ಮಕ್ಕಳನ್ನು ರಕ್ಷಿಸಿ ಬೇರೆ ಬಸ್ ನಲ್ಲಿ ಪ್ರವಾಸಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯರು ಮಕ್ಕಳನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular