BREAKING: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ ಒಂದೇ ದಿನ 5 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೊಂಟೆಪದವು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಮಂಗಳೂರಿನಲ್ಲಿಯೇ ದಿನೇಶ್ ಗುಂಡೂರಾವ್ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಸರ್ಕ್ಯೂಟ್ ಹೌಸ್ ನಲ್ಲಿ ಜನರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಮೃತರ ಕುಟುಂಬದವರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read