BREAKING : 545 ‘PSI’ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ಬೆಂಗಳೂರು : 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿಗೆ ಜ.23 ರಂದು ಮರುಪರೀಕ್ಷೆ ನಡೆದಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಸುಸೂತ್ರವಾಗಿ ಪರೀಕ್ಷೆ ನಡೆಸಿದೆ.

ಅಭ್ಯರ್ಥಿಗಳು ದಿನಾಂಕ 30-01-2024 ರಿಂದ 05-02-2024 ರ ಸಂಜೆ 05-00 ಗಂಟೆಯೊಳಗೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ. ಅಭ್ಯರ್ಥಿಗಳು ತಮ್ಮ ಬುಕ್ಲೆಟ್ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

https://cetonline.karnataka.gov.in/keawebentry456/PSI2023/PSI%20-%20PROVISIONAL%20ANSWER%20KEYkannada.pdf ಮೂಲಕ ಚೆಕ್ ಮಾಡಬಹುದು.

545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರುಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸಲು ತೀರ್ಮಾನಿಸಲಾಗಿತ್ತು.ಇದೀಗ ಪಿಎಸ್ ಐ ಮರು ಪರೀಕ್ಷೆಯ ಕೀ ಉತ್ತರ ಪ್ರಕಟವಾಗಿದ್ದು, ಅಭ್ಯರ್ಥಿಗಳು ಚೆಕ್ ಮಾಡಿಕೊಳ್ಳಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read