ಬೆಂಗಳೂರು: ಬೆಂಗಳೂರಿನಲ್ಲಿ ಶೇ.60ರಷ್ಟು ನಾಮಫಲಕಗಳ ಗಡುವನ್ನು ಇನ್ನೂ ಎರಡು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಪ್ರಕಟಿಸಿದ್ದಾರೆ.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ತಿಳಿಸಿದ್ದಾರೆ.