HomeLatest NewsBREAKING: ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ, ಪತಿ, ಬಾಲಕ ಸೇರಿ 8 ಮಂದಿ ಮೇಲೆ 10ಕ್ಕೂ ಹೆಚ್ಚು...

BREAKING: ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ, ಪತಿ, ಬಾಲಕ ಸೇರಿ 8 ಮಂದಿ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ

ಹಾಸನ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮನವರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ಶಿಕ್ಷಕಿ ಚಿಕ್ಕಮ್ಮನವರ ಮುಖ, ಕೈಕಾಲಿಗೆ ಬೀದಿ ನಾಯಿಗಳು ಕಚ್ಚಿವೆ. ಚಿಕ್ಕಮ್ಮ ಬೇಲೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಆಗಿದ್ದಾರೆ. ನಾಯಿಗಳಿಂದ ಶಿಕ್ಷಕಿಯನ್ನು ರಕ್ಷಿಸಲು ಪತಿ ಶಿವಕುಮಾರ್ ಮುಂದಾಗಿದ್ದರು. ಶಿವಕುಮಾರ್ ಸೇರಿದಂತೆ 7 ಜನರಿಗೆ ನಾಯಿಗಳು ಕಚ್ಚಿವೆ.

ಶಿಕ್ಷಕಿ ಚಿಕ್ಕಮ್ಮ ಅವರಿಗೆ ನೀಡಿದ ಸಮೀಕ್ಷೆ ಅವಧಿ ಇಂದು ಕೊನೆಯದಾಗಿತ್ತು. ಅವರಿಗೆ ನೀಡಿದ ಮನೆಗಳ ಪೈಕಿ ಮೂರು ಮನೆಗಳ ಸಮೀಕ್ಷೆ ಬಾಕಿ ಉಳಿದಿದ್ದು, ನವೀನ್ ಎಂಬುವವರ ಮನೆಗೆ ಸಮೀಕ್ಷೆಗೆ ಚಿಕ್ಕಮ್ಮ ತೆರಳಿದ್ದ ವೇಳೆ ಅವರ ಮೇಲೆ 10ಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿವೆ. ಪತ್ನಿ ರಕ್ಷಿಸಲು ಮುಂದಾದ ಪತಿ ಶಿವಕುಮಾರ್ ಅವರಿಗೂ ನಾಯಿಗಳು ಕಚ್ಚಿವೆ. ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿ ಶಿವಕುಮಾರ್ ಅವರ ರಕ್ಷಣೆಗೆ ಮುಂದಾಗಿದ್ದ ಧರ್ಮ, ಪೃಥ್ವಿ, ಸಚಿನ್ ಸೇರಿದಂತೆ 7 ಜನರಿಗೂ ನಾಯಿಗಳು ಕಚ್ಚಿವೆ. ಅಲ್ಲೇ ಆಟವಾಡುತ್ತಿದ್ದ ಬಾಲಕ ಕಿಶನ್ ಗೂ ನಾಯಿಗಳು ಕಚ್ಚಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಲೂಕು ಆಸ್ಪತ್ರೆಯಲ್ಲಿ ಶಿಕ್ಷಕಿ ಸೇರಿ ಎಲ್ಲಾ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಬೇಲೂರು ಶಾಸಕ ಹೆಚ್.ಕೆ. ಸುರೇಶ್ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular