ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಬಿಬಿಎಂಪಿ ಪೌರ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತರನ್ನು ಬಿಬಿಎಂಪಿ ಪೌರ ಕಾರ್ಮಿಕ ಮಹಿಳೆ ಸರೋಜ ಎಂದು ಗುರುತಿಸಲಾಗಿದೆ. ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ಟಿಪ್ಪರ್ ಡಿಕ್ಕಿಯಾಗಿ ಕೆಳಗೆ ಬಿದ್ದು ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಾಗಿಯಾಗಿದ್ದು, ವಿಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

