HomeLatest NewsBREAKING: ಸಾಮರಸ್ಯದ ಸಮಾಜ ನಿರ್ಮಾಣದತ್ತ ದೃಢ ಹೆಜ್ಜೆ:  'ದ್ವೇಷ ಭಾಷಣ ಪ್ರತಿಬಂಧಕ' ಮಸೂದೆ ಮಂಡನೆಗೆ ಸಂಪುಟ...

BREAKING: ಸಾಮರಸ್ಯದ ಸಮಾಜ ನಿರ್ಮಾಣದತ್ತ ದೃಢ ಹೆಜ್ಜೆ:  ‘ದ್ವೇಷ ಭಾಷಣ ಪ್ರತಿಬಂಧಕ’ ಮಸೂದೆ ಮಂಡನೆಗೆ ಸಂಪುಟ ಅಸ್ತು

ಬೆಂಗಳೂರು: ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ಆ ಮೂಲಕ‌ ಅಮಾಯಕ‌ ಜನರ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕೆಂಬ ಉದ್ದೇಶದೊಂದಿಗೆ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ಮುಂದಿನ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದು ಕಾಯ್ದೆಯಾಗಿ ಜಾರಿಗೆ ಬಂದ ನಂತರದಿಂದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಕೃತ್ಯ ಎಸಗುವ ವ್ಯಕ್ತಿ ಅಥವಾ ಸಂಘಟನೆಗಳಿಗೆ ಶಿಕ್ಷೆ ವಿಧಿಸಲು ಕಾನೂನಾತ್ಮಕ ಅವಕಾಶ ಲಭ್ಯವಾಗಲಿದೆ. ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸಬೇಕು ಎನ್ನುವ ಸಂಕಲ್ಪ ರಾಜ್ಯ ಸರ್ಕಾರದ್ದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular