ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಹಾನಿಯಾಗಿದೆ. ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದ ಗೋದಾಮು ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಬೆಂಗಳೂರು -ತುಮಕೂರು ರಸ್ತೆ ಅಡಕಮಾರನಹಳ್ಳಿಯ ಆಂಜನೇಯ ದೇವಾಲಯದ ಬಳಿ ಆಹಾರ ಪದಾರ್ಥ ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ಸ್ಥಿತಿ ಉಂಟಾಗಿತ್ತು. ನೆಲಮಂಗಲ ಅಗ್ನಿಶಾಮಕ ವಾಹನ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಮಾದನಾಯಕನಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯಿಂದಾಗಿ ಭಾರಿ ಪ್ರಮಾಣದ ಹಾನಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

