ತುಮಕೂರು: ದಂಪತಿ ತೆರಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಪತಿ ಸಾವನ್ನಪ್ಪಿದ್ದಾರೆ. ಪತ್ನಿ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. ನರಸಿಂಹಮೂರ್ತಿ(45) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ ನ ವೈ.ಕೆ. ರಾಮಯ್ಯ ಉದ್ಯಾನವನದ ಸಮೀಪ ಅಪಘಾತ ಸಂಭವಿಸಿದ್ದು, ಕಟ್ಟಿಗೆಹಳ್ಳಿ ಗ್ರಾಮದ ನರಸಿಂಹಮೂರ್ತಿ ಸಾವನ್ನಪ್ಪಿದ್ದಾರೆ. ವಸಂತಾ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಲಾರಿ ಮತ್ತು ಚಾಲಕನನ್ನು ಕುಣಿಗಲ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.