ಧಾರವಾಡ: ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದೆ.
ಕಿಶನ್ ಖಾನಾವಾಲೆ(35), ಕಿರಣ್(34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ನಿಂದ ಬಿದ್ದಾಗ ಹಿಂದೆ ಬರುತ್ತಿದ್ದ ಲಾರಿ ಹರಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಧಾರವಾಡದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

