BREAKING : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ‘HDK’ ನೇತೃತ್ವದಲ್ಲಿ ‘ಜೆಡಿಎಸ್’ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ.

ಹಾಸನದ ಖಾಸಗಿ ರೆಸಾರ್ಟ್ ನಲ್ಲಿ ಸಭೆ ನಡೆಯಲಿದ್ದು, ಜೆಡಿಎಸ್ ಮುಖಂಡರು. ಶಾಸಕರು ಮತ್ತಿತರರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ, ಲೋಕಸಭೆ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು. ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಕುಮಾರಸ್ವಾಮಿ ನನ್ನ ಧರ್ಮಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಹಾಸನಕ್ಕೆ ತೆರಳಿ ಶ್ರೀ ಹಾಸನಾಂಬೆಯ ದರ್ಶನ ಪಡೆದುಕೊಂಡೆ. ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡು ಎಂದು ಅಮ್ಮನವರಲ್ಲಿ ಅರಿಕೆ ಮಾಡಿಕೊಂಡೆ ಎಂದು ಟ್ವೀಟ್ ಮಾಡಿದ್ದಾರೆ.

https://twitter.com/hd_kumaraswamy/status/1721805473526206927

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read