HomeKarnatakaBREAKING: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

BREAKING: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಟೈರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು, ಮಲ್ಲಿಕಾರ್ಜುನ ಮೃತಪಟ್ಟವರು ಎಂದು ಹೇಳಲಾಗಿದೆ.

ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular