HomeKarnatakaBREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ...

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ.!

ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕುಸಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ಅಶೋಕ, ತಾಯಿ ಶಾರದಮ್ಮ ಎಂಬುವವರನ್ನು ಪಾಪಿ ಪುತ್ರ ಗಂಗಾಧರಪ್ಪ ಎಂಬಾತ ಬರ್ಬರವಾಗಿ ಕೊಂದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾವ ಕಾರಣಕ್ಕೆ ಕೊಲೆ ನಡೆಯಿತು ಎಂಬುದು ತಿಳಿದು ಬಂದಿಲ್ಲ. ಸದ್ಯ ಪರಾರಿಯಾದ ಪುತ್ರ ಗಂಗಾಧರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular