HomeLatest NewsBREAKING: ದುಡುಕಿನ ನಿರ್ಧಾರ ಕೈಗೊಂಡ ಯೋಧ ಆತ್ಮಹತ್ಯೆ

BREAKING: ದುಡುಕಿನ ನಿರ್ಧಾರ ಕೈಗೊಂಡ ಯೋಧ ಆತ್ಮಹತ್ಯೆ

ಮೈಸೂರು: ಮನೆ ಕಟ್ಟಲು ಪಡೆದಿದ್ದ ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ಘಟನೆ ನಡೆದಿದೆ.

ನೇಣು ಬಿಗಿದುಕೊಂಡು ಯೋಧ ಎಂ. ಚಂದ್ರಶೇಖರ್(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ ಪ್ಯಾರಾಚೂಟ್ ರೆಜಿಮೆಂಟ್ ನ ಯೋಧರಾಗಿದ್ದರು, ಹುಣಸೂರಿನ ಹೊಸ ಬಡಾವಣೆಯಲ್ಲಿ ಹೊಸದಾಗಿ ಮನೆ ನಿರ್ಮಿಸಿದ್ದರು.

ಎರಡು ವರ್ಷಗಳ ಹಿಂದೆ ಎಂ. ಚಂದ್ರಶೇಖರ್ ಅವರು ಮನೆ ನಿರ್ಮಿಸಿದ್ದು, ಬ್ಯಾಂಕ್ ನಲ್ಲಿ ಮತ್ತು ಸ್ನೇಹಿತರ ಬಳಿ ಸಾಲ ಪಡೆದುಕೊಂಡಿದ್ದರು. ಸಾಲ ತೀರಿಸಲಾಗದೆ ಯೋಧ ಎಂ. ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಆಗ್ರಾ, ಜಮ್ಮು –ಕಾಶ್ಮೀರ, ಚೀನಾ ಗಡಿಯಲ್ಲಿ ಅವರು ಕಾರ್ಯ ನಿರ್ವಹಿಸಿದ್ದರು. ಒಂದು ತಿಂಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದ ಎಂ. ಚಂದ್ರಶೇಖರ್ ದೀಪಾವಳಿ ಹಬ್ಬದ ನಂತರ ಕರ್ತವ್ಯ ತೆರಳಬೇಕಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular