ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ತೊಟ್ಟಹಳ್ಳಿ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಅಜ್ಜಿ, ಮೊಮ್ಮಗ ಸಾವನ್ನಪ್ಪಿದ್ದಾರೆ.
ಅಜ್ಜಿ ಅಮ್ಮಯ್ಯಮ್ಮ(55) ಹಾಗೂ ಮೊಮ್ಮಗ ಲೋಹಿತ್(12) ಮೃತಪಟ್ಟವರು ಎಂದು ಗುರುತಿಸಲಾಗಿದೆ. ತೋಟದ ತಂತಿ ಬೇಲಿಯನ್ನು ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ. ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.