HomeKarnatakaBREAKING : ರಾಜ್ಯದಲ್ಲಿ ಘೋರ ದುರಂತ : 'ಪಾಗಲ್ ಪ್ರೇಮಿ' ಕಾಟ ತಾಳಲಾರದೇ ಬೆಂಕಿ ಹಚ್ಚಿಕೊಂಡು...

BREAKING : ರಾಜ್ಯದಲ್ಲಿ ಘೋರ ದುರಂತ : ‘ಪಾಗಲ್ ಪ್ರೇಮಿ’ ಕಾಟ ತಾಳಲಾರದೇ ಬೆಂಕಿ ಹಚ್ಚಿಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ.!

ಬೆಳಗಾವಿ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪಾಗಲ್ ಪ್ರೇಮಿ ಕಾಟ ತಾಳಲಾರದೇ ಬೆಂಕಿ ಹಚ್ಚಿಕೊಂಡು 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಘಟಪ್ರಭಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದಲಿಂಗ ಪೂಜಾರಿ ಎಂಬ ಯುವಕ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದಿದ್ದನು. ಇದರಿಂದ ತೀವ್ರ ಹಿಂಸೆಗೊಳಗಾದ ಬಾಲಕಿ ಮನನೊಂದು ಬೆಂಕಿ ಹಚ್ಚಿಕೊಂಡಿದ್ದಾಳೆ.

ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬಾಲಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದಲಿಂಗ ಪೂಜಾರಿ ಎಂಬಾತ ಬಾಲಕಿಯ ಹಿಂದೆ ಬಿದ್ದು, ಪ್ರೀತಿಸುವಂತೆ ಒತ್ತಾಯಿಸುತ್ತಿದ್ದದ್ದನಂತೆ. ಇದರಿಂದ ಬೇಸತ್ತ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ಸಿದ್ದಲಿಂಗ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular