HomeLatest NewsBREAKING : ರಾಜ್ಯದಲ್ಲಿ ಘೋರ ದುರಂತ : ಸಿಡಿಲು ಬಡಿದು ಬಾಲಕ ಸೇರಿದಂತೆ ಮೂವರು ಸಾವು.!

BREAKING : ರಾಜ್ಯದಲ್ಲಿ ಘೋರ ದುರಂತ : ಸಿಡಿಲು ಬಡಿದು ಬಾಲಕ ಸೇರಿದಂತೆ ಮೂವರು ಸಾವು.!

ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಸಿಡಿಲು ಬಡಿದು ಬಾಲಕ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಕೊಪ್ಪಳ : ತೋಟದ ಮನೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳದ ಚುಕ್ಕನಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ (48) ಹಾಗೂ ಗೋವಿಂದಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಹೊಸಪೇಟೆ: ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದು ಬಾಲಕ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದ ಪಾಂಡುನಾಯಕ(14) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಮನೆಯ ಬಳಿ ನಿಂತಿದ್ದಾಗ ಸಿಡಿಲು ಬಡಿದು ಪಾಂಡುನಾಯಕ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular