ಬೆಳಗಾವಿ: ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿದ ಘಟನೆ ಬೆಳಗಾವಿಯ ಸದಾಶಿವನಗರದ ಲಕ್ಷ್ಮಿ ಕಾಂಪ್ಲೆಕ್ಸ್ ಬಳಿ ತಡರಾತ್ರಿ ನಡೆದಿದೆ.
ಮಹಾದೇವಿ ಕರೆಣ್ಣನವರ(42) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಅವರನ್ನು ಕೊಲೆ ಮಾಡಲಾಗಿದೆ. ಹೋಟೆಲ್ ನಲ್ಲಿ ಕೆಲಸ ಮುಗಿಸಿ ಮಹಾದೇವಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.