ಬೆಂಗಳೂರು: ಶಾಲಾ ಕಟ್ಟಡದ ಮೇಲೆ ಹತ್ತಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೈನಲ್ಲಿ ಗಾಜಿನ ಚೂರು ಹಿಡಿದು ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದ್ದಾನೆ.
ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಲಾ ಕಟ್ಟಡದ ಮೇಲೆ ಹತ್ತಿದ ಶೇಖ್ ಇಬ್ರಾಹಿಂ ಎಂಬಾತ ಹೈಡ್ರಾಮಾ ನಡೆಸಿದ್ದಾನೆ. ಸ್ಥಳಕ್ಕೆ ಬಂದ ಕೋಣನಕುಂಟೆ ಠಾಣೆ ಪೋಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಶೇಖ್ ಇಬ್ರಾಹಿಂ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಶೇಖ್ ಇಬ್ರಾಹಿಂ ಮಾಹಿತಿ ನೀಡಿದ್ದಾನೆ. ಯುವಕನಿಗೆ ಕೌನ್ಸೆಲಿಂಗ್ ನಡೆಸಿದ ಪೊಲೀಸರು ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

