BREAKING : ಲೋಕಸಭಾ ಚುನಾವಣೆಗೆ AAP –ಕಾಂಗ್ರೆಸ್ ‘ಮೈತ್ರಿ’ ಘೋಷಣೆ ; ಸೀಟು ಹಂಚಿಕೆ ಫೈನಲ್..!

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಎಎಪಿ –ಕಾಂಗ್ರೆಸ್ ನಡುವೆ ಮೈತ್ರಿ ಘೋಷಣೆಯಾಗಿದೆ ಎಂದು ತಿಳಿದು ಬಂದಿದೆ.

ಹೌದು, ಮುಂಬರುವ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಶನಿವಾರ ದೃಢಪಡಿಸಿವೆ. ದೆಹಲಿ, ಗುಜರಾತ್ ಮತ್ತು ಹರಿಯಾಣದಲ್ಲಿ ಪಕ್ಷಗಳು ತಮ್ಮ ಸೀಟು ಹಂಚಿಕೆ ಒಪ್ಪಂದಗಳನ್ನು ಹಂಚಿಕೊಂಡಿವೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ಎಎಪಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮುಕುಲ್ ವಾಸ್ನಿಕ್ ತಿಳಿಸಿದ್ದಾರೆ.

ಎಎಪಿ ನವದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ಪೂರ್ವ ದೆಹಲಿ ಸ್ಥಾನಗಳಿಂದ ಸ್ಪರ್ಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿಗಳು ಚಾಂದನಿ ಚೌಕ್, ಈಶಾನ್ಯ ದೆಹಲಿ ಮತ್ತು ವಾಯುವ್ಯ ದೆಹಲಿ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದು ವಾಸ್ನಿಕ್ ಹೇಳಿದರು.ಗುಜರಾತ್ 26 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಎಎಪಿ ಭರೂಚ್ ಮತ್ತು ಭಾವನಗರ 2 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read