ಚಿತ್ರದುರ್ಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನೇರಲಗುಂಟೆ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಪ್ರಜ್ವಲ್(22) ಮತ್ತು ಅಭಿಷೇಕ್(18) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಯಕನಹಳ್ಳಿ ಜಾತ್ರೆ ಮುಗಿಸಿ ಬರುವಾಗ ಅಪಘಾತ ಸಂಭವಿಸಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

