BREAKING: ವಾಲ್ಮೀಕಿ ಸಮುದಾಯ ಅವಹೇಳನ ಆರೋಪ: ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್: ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಳಗಾವಿ: ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ರಮೇಶ್ ಕತ್ತಿ ವಿರುದ್ಧ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸಲಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಾಗಿ ಸಮಾಜದ ಮುಖಂಡ ರಾಜಶೇಖರ ತಳವಾರ ದೂರು ನೀಡಿದ್ದಾರೆ. ನಾಳೆ ರಾಜ್ಯದಾದ್ಯಂತ ಹೋರಾಟಕ್ಕೆ ವಾಲ್ಮೀಕಿ ಸಮಾಜ ಕರೆ ನೀಡಿದೆ. ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

ಹೇಳಿಕೆ ಬಗ್ಗೆ ರಮೇಶ್ ಕತ್ತಿ ಸ್ಪಷ್ಟನೆ

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಕತ್ತಿ ವಿರುದ್ಧ ಕೇಸ್ ದಾಖಲಾಗಿದೆ. ತಮ್ಮ ಹೇಳಿಕೆಯ ಕುರಿತಾಗಿ ರಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.

ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಗೆಲುವು ಸಹಿಸಲಾಗದ ವಿರೋಧಿಗಳು ಹೇಳಿಕೆಯನ್ನು ತಿರುಚಿದ್ದಾರೆ. ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ವಿಡಿಯೋ ಹೇಳಿಕೆ ಮೂಲಕ ರಮೇಶ್ ಕತ್ತಿ ವಿಷಾದ ವ್ಯಕ್ತಪಡಿಸಿದ್ದಾರೆ.

https://www.facebook.com/reel/4287087178244666
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read