BREAKING : ‘ಗನ್ ಲೈಸೆನ್ಸ್’ ರದ್ದು ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ |Actor Darshan

ಬೆಂಗಳೂರು : ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಹೌದು, ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಡಿಸಿಪಿ ಆದೇಶಕ್ಕೆ ತಡೆಕೋರಿ ಹೈಕೋರ್ಟ್’ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಗನ್ ಲೈಸೆನ್ಸ್ ರದ್ದು ಮಾಡಿರುವುದನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.ದರ್ಶನ್ ಪರ ವಕೀಲರಾದ ಸುನಿಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದರು. ಪೊಲೀಸರ ನೋಟಿಸ್ ಗೆ ಉತ್ತರ ನೀಡಿದ ನಟ ದರ್ಶನ್ ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದರು. ಆದರೆ ದರ್ಶನ್ ಮನವಿ ತಿರಸ್ಕರಿಸಿದ ಪೊಲೀಸರು ಗನ್ ವಶಕ್ಕೆ ಪಡೆದಿದ್ದರು .
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read