HomeLatest NewsBREAKING: ನಟ ದರ್ಶನ್ ಗ್ಯಾಂಗ್ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್: ಪ್ರಮುಖ ಆರೋಪಿ ಅರೆಸ್ಟ್

BREAKING: ನಟ ದರ್ಶನ್ ಗ್ಯಾಂಗ್ ರೀತಿ ಯುವಕನ ಅಪಹರಿಸಿ ಹಲ್ಲೆ ಕೇಸ್: ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ರೀತಿಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿ ಹೇಮಂತ್ ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ.

24 ವರ್ಷದ ಹೇಮಂತ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಯುವಕನನ್ನು ಕಿಡ್ನಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿ ಹೇಮಂತ್ ನನ್ನು ಬಂಧಿಸಿದ್ದಾರೆ.

ಕುಶಾಲ್ ಅಪಹರಣ ಮಾಡಿ ಬೆತ್ತಲೆಗೊಳಿಸಿದ್ದ ಗ್ಯಾಂಗ್ ಹಲ್ಲೆ ನಡೆಸಿ ವಿಡಿಯೋ ಮಾಡಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಹೇಮಂತ್ ಪರಾರಿಯಾಗಿದ್ದ. ತುಮಕೂರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಹೇಮಂತನ ವಿರುದ್ಧ 3-4 ಪ್ರಕರಣಗಳು ಇವೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular